ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕಿರೀಟ ತೊಟ್ಟ 18 ವರ್ಷದ ಗುಕೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೇರಿಯಸ್ ಹೋಟೆಲ್‌ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಗೇಮ್​ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್​ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ಚೀನಾದ ಡಿಂಗ್‌ ಲಿರೆನ್‌ರನ್ನು ಸೋಲಿಸುವ ಮೂಲಕ ವಿಶ್ವ ಚೆಸ್‌ ಚಾಂಪಿಯನ್‌ಷಿಪ್‌ ಪ್ರಶಸ್ತಿ ಗೆದ್ದರು.

13 ಪಂದ್ಯಗಳ ಅಂತ್ಯಕ್ಕೆ ಇಬ್ಬರೂ ಆಟಗಾರರು ತಲಾ 6.5 ಅಂಕ ಹೊಂದಿದ್ದರು. ಫಲಿತಾಂಶ ನಿರ್ಣಯಕ್ಕಾಗಿ 14ನೇ ಸುತ್ತಿನಲ್ಲಿ ಗೆಲುವು ಸಾಧಿಸಬೇಕಿತ್ತು. ಡಿಂಗ್‌ ಲಿರೇನ್‌ 14ನೇ ಸುತ್ತಿನ ಪಂದ್ಯದ ಕೊನೆಯಲ್ಲಿ ಮಾಡಿದ ಭಾರೀ ಪ್ರಮಾದದಿಂದ ಡಿ.ಗುಕೇಶ್‌ ವಿಶ್ವ ಚಾಂಪಿಯನ್‌ ಪಟ್ಟ ಅಲಂಕರಿಸಿದರು.

ಚೆನ್ನೈ ಮೂಲದ ಗುಕೇಶ್‌ ದೊಮ್ಮರಾಜು ಇದೇ ಮೊದಲ ಬಾರಿಗೆ ವಿಶ್ವ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದಾರೆ. 18 ವರ್ಷದ ಚೆನ್ನೈ ಮೂಲದ ಗ್ರ್ಯಾಂಡ್‌ ಮಾಸ್ಟರ್‌ ಈ ಗೆಲುವಿನ ಮೂಲಕ ಫಿಡೆ ವಿಶ್ವ ಚೆಸ್‌ ಚಾಂಪಿಯನ್‌ಷಿಪ್‌ ಗೆದ್ದ ಅತ್ಯಂತ ಮೂರನೇ ಕಿರಿಯ ಆಟಗಾರ ಎನಿಸಿದ್ದಾರೆ. ಇತಿಹಾಸದಲ್ಲಿ ಇಲ್ಲಿಯವರೆಗೂ ಸಾಕಷ್ಟು ದಿಗ್ಗಜ ಚೆಸ್‌ ಪ್ಲೇಯರ್‌ಗಳನ್ನು ಕಂಡಿದೆ. ಕಾರ್ಲ್‌ಸೆನ್‌, ಕ್ರ್ಯಾಮ್ನಿಕ್‌, ಕ್ಯಾಸ್ಪರೋವ್‌, ವಿಶ್ವನಾಥನ್‌ ಆನಂದ್‌. ಆದರೆ, ತಮ್ಮ 18ನೇ ವಯಸ್ಸಿನಲ್ಲೇ ಫಿಡೆ ವಿಶ್ವ ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಗೆಲುವು ಸಾಧಿಸಿದ್ದು ಡಿ. ಗುಕೇಶ್‌ ಮಾತ್ರ.

ಪ್ರತಿಷ್ಠಿತ ವಿಶ್ವ ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಗೆಲುವು ಸಾಧಿಸಿದ ಡಿ. ಗುಕೇಶ್‌ಗೆ ಅಭಿನಂದನೆಗಳು. ಚೆಸ್‌ ಇತಿಹಾಸದಲ್ಲಿಯೇ ಅತ್ಯಂತ ಕಿರಿಯ ವಿಶ್ವಚಾಂಪಿಯನ್‌ ಎನಿಸಿಕೊಂಡಿದ್ದಾರೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಇಡೀ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದು ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಾಂಡವೀಯ ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!