Tuesday, July 5, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 185 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 185 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 172 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 168 ಮಂದಿ ಗುಣಮುಖರಾದರು. ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 9470 ಹೊಸ ಪ್ರಕರಣ
ಕೇರಳದಲ್ಲಿ ಶನಿವಾರ ಹೊಸದಾಗಿ 9470 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 8971 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 12,881 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 101 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 11.45 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss