Wednesday, August 10, 2022

Latest Posts

ದ.ಕದಲ್ಲಿ ಏರಿದ ಕೊರೋನಾ ಸೋಂಕಿತರ ಸಂಖ್ಯೆ: 186 ಮಂದಿಗೆ ಸೋಂಕು

ದಿಗಂತ ವರದಿ ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಇಳಿಮುಖವಾಗಿದ್ದ ಕೊರೋನಾ ಪ್ರಕರಣ ಗುರುವಾರ ಮತ್ತೆ ಏರಿಕೆಯಾಗಿದೆ.
ಗುರುವಾರ 186 ಹೊಸ ಪ್ರಕರಣ ಪತ್ತೆಯಾಗಿದ್ದು, 173  ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಗುರುವಾರ ಪಾಸಿಟಿವಿಟಿ ದರ ಶೇ.1.65 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 112836 ಕ್ಕೆ ಏರಿಕೆಯಾಗಿದೆ. ಈ ಪೈಕಿ 1430 ಸಕ್ರಿಯ ಪ್ರಕರಣಗಳು. 109780 ಮಂದಿ ಗುಣಮುಖರಾಗಿದ್ದಾರೆ.1626 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 87191 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 10611770 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss