Friday, July 1, 2022

Latest Posts

ಕೊಡಗು| 187 ಮಂದಿಯಲ್ಲಿ ಕೊರೋನಾ ಸೋಂಕು ದೃಢ: 2,055 ಸಕ್ರಿಯ ಪ್ರಕರಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 187 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 46 ಸೋಮವಾರಪೇಟೆ ತಾಲೂಕಿನಲ್ಲಿ 78 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 63 ಪ್ರಕರಣಗಳು ಪತ್ತೆಯಾಗಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 26,943ರಷ್ಟಾಗಿದ್ದು,ಕಳೆದ 24 ಗಂಟೆಗಳಲ್ಲಿ 231ಮಂದಿ ಗುಣಮುಖರಾಗುವುದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಮುಕ್ತರಾದವರ ಸಂಖ್ಯೆ 24,545ಕ್ಕೆ ಏರಿಕೆಯಾಗಿದೆ. ಪ್ರಸಕ್ತ 2,055 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 252 ಹಾಗೂ ಪಾಸಿಟಿವಿಟಿ ಪ್ರಮಾಣ ಶೇ.7.3ರಷ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss