ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸತಾಗಿ 188 ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,468 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ದೇಶದಲ್ಲಿ ಒಂದೇ ದಿನ 1, 34, 995 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇತ್ತೀಚೆಗಷ್ಟೇ ಚೀನಾದಿಂದ ತಮಿಳುನಾಡಿಗೆ ಆಗಮಿಸಿದ ತಾಯಿ, ಮಗುವಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಟ್ ಮಾಡಲಾಗಿದೆ.