ರಾಜ್ಯದಲ್ಲಿ ಶೀಘ್ರವೇ 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಶೀಘ್ರವೇ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಸಿಎ ಸಿದ್ದರಾಮಯ್ಯ ಹೇಳಿದರು.

ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ತಲೆಯೆತ್ತಲಿದೆ. ಇದಲ್ಲದೇ ಅಗತ್ಯವಿರುವೆಡೆ ಹೆಚ್ಚುವರಿ ಕ್ಯಾಂಟೀನ್ ಅನ್ನು ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದರು.

ಇದೇ ವೇಳೆ ಸಿಎಂ, ಕನಕದಾಸರು ಸಮಾಜ ಸುಧಾರಕರಾಗಿದ್ದರು. ಅವರು ಸಾಹಿತ್ಯದ ಮೂಲಕ ಮನುಷ್ಯತ್ವವನ್ನು ಸಾರಿದರು. ಜಾತ್ಯತೀತವಾದ, ಮೇಲು ಕೀಳು ಬೇಧಭಾವವಿಲ್ಲದ ಸಮಸಮಾಜ ನಿರ್ಮಿಸಲು ಶ್ರಮಿಸಿದ ವಿಶ್ವಮಾನವ. ರಾಮಧಾನ್ಯ ಚರಿತೆ, ಮೋಹನತರಂಗಿಣಿ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದರು. ಸಮಾಜದ ತಾರತಮ್ಯ ಹೋಗಲಾಡಿಸಲು ಹೋರಾಡಿದ ದಾಸಶ್ರೇಷ್ಠರ ದಿನವನ್ನು ಸರ್ಕಾರ ಇಂದು ಆಚರಿಸುತ್ತಿದೆ. ಸಾಹಿತ್ಯದ ಮೂಲಕ ತಮ್ಮ ಆದರ್ಶಗಳನ್ನು ಜನರಿಗೆ ತಿಳಿಹೇಳಿ ಜಾಗೃತಿ ಮೂಡಿಸಿದ್ದರು. ಜನರಿಗೆ ಅರ್ಥವಾಗುವ ಸರಳ ಭಾಷೆಯಲ್ಲಿ ತಮ್ಮ ದಾಸಸಾಹಿತ್ಯವನ್ನು ರಚಿಸಿದರು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!