Sunday, August 14, 2022

Latest Posts

1893ರ ಸ್ವಾಮಿ ವಿವೇಕಾನಂದರ ಭಾಷಣ ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದೆ: ಪ್ರಧಾನಿ ಮೋದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

1893ರಲ್ಲಿ ಅಮೆರಿಕದ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಭಾಷಣವನ್ನು ಪ್ರಧಾನಿ ಮೋದಿ ಸ್ಮರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ವಾಮಿ ವಿವೇಕಾನಂದರ 1893ರ ಚಿಕಾಗೋ ಭಾಷಣವು ಭಾರತೀಯ ಸಂಸ್ಕೃತಿಯ ಉತ್ಕೃಷ್ಟತೆಯನ್ನು ಸುಂದರವಾಗಿ ಪ್ರದರ್ಶಿಸಿತ್ತು. ಅವರ ಭಾಷಣವು ಸಮೃದ್ಧ, ನ್ಯಾಯನಿಷ್ಠೆ ಹಾಗೂ ಬಹುಸಂಸ್ಕೃತಿಯನ್ನು ಒಳಗೊಂಡಿರುವ ಜಗತ್ತನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಬರೆದುಕೊಂಡಿದ್ದಾರೆ.
ವಿವೇಕಾನಂದರ ಭಾಷಣವು ಹಿಂದೂ ಧರ್ಮ ಮತ್ತು ಭಾರತೀಯ ಸಂಸ್ಕೃತಿಯ ಬಗ್ಗೆ ಸುದೀರ್ಘವಾಗಿ ಸಾರಿದೆ. ಅವರ 1893ರ ಭಾಷಣ ಇಂದಿಗೂ ಪ್ರತಿಧ್ವನಿಸುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss