ಚಲಿಸುತ್ತಿದ್ದ ಕಾರಿನಲ್ಲಿ 19 ವರ್ಷದ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕೇರಳದ ಕೊಚ್ಚಿಯಲ್ಲಿ ಗುರುವಾರ ತಡರಾತ್ರಿ 19 ವರ್ಷದ ಮಾಡೆಲ್ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ಪೊಲೀಸರು ಮೂವರು ಪುರುಷರು ಮತ್ತು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.
ವರದಿಗಳ ಪ್ರಕಾರ, ಮಾಡೆಲ್ ಕೊಚ್ಚಿನ್ ಶಿಪ್‌ಯಾರ್ಡ್ ಬಳಿ ಪಬ್‌ಗೆ ಭೇಟಿ ನೀಡಿದ್ದಳು. ಈ ವೇಳೆ ಆಕೆ ಕುಡಿದಿದ್ದಳು. ಇದೇ ಅವಕಾಶ ಬಳಸಿಕೊಂಡ ಆರೋಪಿಗಳು ಆಕೆಯನ್ನು ಕಾಕ್ಕನಾಡ್‌ನಲ್ಲಿರುವ ಮನೆಗೆ ಬಿಡುವುದಾಗಿ ಕಾರು ಹತ್ತಿಸಿಕೊಂಡಿದ್ದಾರೆ. ಮತ್ತು ದಾರಿಯಲ್ಲಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ತಡರಾತ್ರಿಯವರೆಗೆ ನಗರದ ಹಲವೆಡೆ ವಾಹನ ಚಲಾಯಿಸಿ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರ, ಹಲ್ಲೆ ನಡೆಸಿ ಆಕೆಯ ಮನೆಯ ಬಳಿ ಬಿಟ್ಟು ಹೋಗಿದ್ದರು.
ಸಂತ್ರಸ್ತೆಯನ್ನು ಆಕೆಯ ರೂಮ್‌ಮೇಟ್ ಕಲಮಶ್ಶೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು,  ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಸಿಕ್ಕ ಬಳಿಕ ವಿಷಯ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್ 370 ಮತ್ತು 376 ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೊಚ್ಚಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಆಘಾತಕಾರಿಯಾಗಿದೆ ಎಂದು ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಘಟನೆಯನ್ನು ತೀವ್ರವಾಗಿ ಖಂಡಿಸಲಾಗಿದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಬಾಲಕಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!