Monday, August 8, 2022

Latest Posts

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ದಿಂದ ಮೇ 16 ರಿಂದ ಮೇ 31 ವೇಳೆ 192 ಲಕ್ಷ ಡೋಸ್ ಕೋವಿಡ್ ಲಸಿಕೆ ರವಾನೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರ್ಕಾರದಿಂದ ಮೇ 16 ರಿಂದ ಮೇ 31 ವೇಳೆಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 192 ಲಕ್ಷ ಡೋಸ್ ಕೋವಿಡ್ ಲಸಿಕೆ ರವಾನೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮೇ 16 ರಿಂದ ಮೇ 31 ರವರೆಗೆ ಒಟ್ಟು 161.99 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ಸರಬರಾಜು ಮಾಡಲಾಗುವುದು. ಈ 191.99 ಲಕ್ಷ ಪ್ರಮಾಣದಲ್ಲಿ 162.5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 29.49 ಲಕ್ಷ ಡೋಸ್ ಕೋವಾಕ್ಸಿನ್ ಲಸಿಕೆಗಳು ಸೇರಿವೆ. ವಿತರಣಾ ವೇಳಾಪಟ್ಟಿಯನ್ನು ಮುಂಚಿತವಾಗಿ ಹಂಚಿಕೊಳ್ಳಲಾಗುತ್ತದೆ. ನಿಗದಿಪಡಿಸಿದ ಪ್ರಮಾಣಗಳ ತರ್ಕಬದ್ಧ ಮತ್ತು ನ್ಯಾಯಯುತ ಬಳಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಲಸಿಕೆ ವ್ಯರ್ಥವನ್ನು ಕಡಿಮೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೋರಲಾಗಿದೆ ಎಂದು ಹೇಳಿದೆ.
ಲಸಿಕೆಗಳ ಪರಿಣಾಮಕಾರಿ ಬಳಕೆ ಮತ್ತು ಶೂನ್ಯ ವ್ಯರ್ಥ ಕುರಿತು ಒತ್ತಿ ಹೇಳಿರುವ ಆರೋಗ್ಯ ಇಲಾಖೆ, ಉಚಿತ ಲಸಿಕೆಗಳ ಪ್ರಮಾಣವನ್ನು 15 ದಿನಗಳ ಮುಂಚಿತವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸುವುದರ ಹಿಂದಿನ ಮೂಲ ಉದ್ದೇಶವೆಂದರೆ ಈ ಉಚಿತ ಲಸಿಕೆ ಪ್ರಮಾಣಗಳನ್ನು 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮತ್ತು ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ನ್ಯಾಯಯುತ ಮತ್ತು ಗರಿಷ್ಠ ಬಳಕೆಗಾಗಿ ಅವರು ಪರಿಣಾಮಕಾರಿ ಯೋಜನೆಗಳನ್ನು ಸಿದ್ಧಪಡಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿದೆ.
ಹಿಂದಿನ ಹದಿನೈದು ದಿನಗಳಲ್ಲಿ, ಅಂದರೆ 1 ಮೇ ರಿಂದ ಮೇ 15, 2021 ಅಂತರದಲ್ಲಿ ಒಟ್ಟು 1.7 ಕೋಟಿಗಿಂತ ಹೆಚ್ಚಿನ ಲಸಿಕೆ ಪ್ರಮಾಣವನ್ನು ಕೇಂದ್ರ ಸರ್ಕಾರವು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. ಮೇ ತಿಂಗಳಲ್ಲಿ ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳ ನೇರ ಸಂಗ್ರಹಣೆಗಾಗಿ 4.39 ಕೋಟಿಗೂ ಅಧಿಕ ಡೋಸ್ ಲಸಿಕೆಗಳನ್ನು ಲಭ್ಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss