ರಾಜ್ಯದ 195 ತಾಲೂಕುಗಳು ಬರಪೀಡಿತ: ಸಚಿವ ಸಂಪುಟ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ 195 ತಾಲೂಕುಗಳು ಬರಪೀಡಿತ ಅಂತ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.
ಈ ಸಭೆಯ ಬಳಿಕ ಸಂಪುಟ ಸಭೆ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಚಿವ ಹೆಚ್ ಕೆ ಪಾಟೀಲ್ ಅವರು, ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ ಅಂತ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.

ಬರ ಘೋಷಣೆ ತಾಲೂಕುಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಬರಗಾಲ ಸ್ಥಿತಿಯಿಂದ 30,432 ಕೋಟಿ ನಷ್ಟ ಉಂಟಾಗಿದೆ. 4,860 ಕೋಟಿ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ. ಬರದಿಂದ 39,039 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!