1984ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ದೆಹಲಿಯ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಇಂದು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18ಕ್ಕೆ ಕಾಯ್ದಿರಿಸಿದ್ದಾರೆ.

ತೀರ್ಪು ಪ್ರಕಟಿಸುವ ಮುನ್ನ79 ವರ್ಷದ ಸಜ್ಜನ್ ಕುಮಾರ್ ಅವರನ್ನು ತಿಹಾರ್ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನವೆಂಬರ್ 1, 1984 ರಂದು ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣ್‌ದೀಪ್ ಸಿಂಗ್ ಅವರ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಈ ಜೋಡಿ ಕೊಲೆ ಸಂಬಂಧ ಪಂಜಾಬಿ ಬಾಗ್ ಪೊಲೀಸ್ ಠಾಣೆ ಆರಂಭದಲ್ಲಿ ಪ್ರಕರಣವನ್ನು ದಾಖಲಿಸಿದ್ದರೂ, ನಂತರ ವಿಶೇಷ ತನಿಖಾ ತಂಡ ತನಿಖೆಯ ಜವಾಬ್ದಾರಿ ವಹಿಸಿಕೊಂಡಿತ್ತು.

ಸಜ್ಜನ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ ನ್ಯಾಯಾಲಯದ ಆದೇಶವು ಅವರು ಕೇವಲ ಈ ಕೃತ್ಯದಲ್ಲಿ ಭಾಗವಹಿಸಿದ್ದು ಮಾತ್ರವಲ್ಲ, ಗುಂಪಿನ ನೇತೃತ್ವ ವಹಿಸಿದ್ದರು ಎಂಬ ಪ್ರಾಥಮಿಕ ಅಭಿಪ್ರಾಯವನ್ನು ರೂಪಿಸಲು ಸಾಕಷ್ಟು ಪುರಾವೆಗಳನ್ನು ಸಾಕ್ಷೀಕರಿಸಿತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!