ರಸ್ತೆ ಜಗಳಕ್ಕೆ ಜೈಲು ಶಿಕ್ಷೆ: ಶರಣಾಗತಿಗೆ ಸಮಯಾವಕಾಶ ಕೇಳಿದ ನವಜೋತ್‌ ಸಿಧು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
34 ವರ್ಷದ ಹಿಂದೆ ನಡೆದ ರಸ್ತೆ ಜಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ, ಪಂಜಾಬ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಗೆ ಸುಪ್ರೀಂ ಕೋರ್ಟ್‌ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಅದರಂತೆ ಇಂದು ನವಜೋತ್ ಸಿಂಗ್ ಸಿಧು ಪಟಿಯಾಲ ಪೊಲೀಸರಿಗೆ ಶರಣಾಗುವ ನಿರೀಕ್ಷೆಯಿತ್ತು. ಆದರೆ ವೈದ್ಯಕೀಯ ಕಾರಣ ನೀಡಿರುವ ಸಿಧು, ಶರಣಾಗಲು ಇನ್ನಷ್ಟು ಕಾಲಾವಕಾಶ ಕೋರಿದ್ದಾರೆ. ರಸ್ತೆ ಗಲಭೆ ಪ್ರಕರಣದಲ್ಲಿ ಜೈಲು ಸೇರುವ ಮುನ್ನ ಕೆಲವು ವಾರಗಳ ಕಾಲಾವಕಾಶ ನೀಡುವಂತೆ ಸಿಧು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ, ಗುರುವಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪಂಜಾಬ್ ಪೊಲೀಸರಿಗೆ ಶೀಘ್ರದಲ್ಲೇ ಶರಣಾಗುವುದಾಗಿ ಸಿಧು ಸುಳಿವು ನೀಡಿದ್ದರು. 1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಧು ಶಿಕ್ಷೆಗೆ ಒಳಗಾಗಿದ್ದಾರೆ. ನವಜೋತ್‌ ನಡೆಸಿದ ದಾಂಧಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಎಂಬ ವೃದ್ಧ ಮೃತಪಟ್ಟಿದ್ದರು. ಗುರುವಾರ ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಧುಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!