ಹೊಸ ದಿಗಂತ ಡಿಜಿಟಲ್ ಡೆಸ್ಕ್:
36 ವರ್ಷಗಳ ಹಿಂದೆ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯ್ಯಾ ಸಯೀದ್ ಅವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಶ್ರೀನಗರದ ಇಶ್ಬೇರ್ ನಿಶಾತ್ ನನ್ನು ಬಂಧಿಸಿದೆ.
ಈತ 36 ವರ್ಷಗಳ ಹಿಂದೆ ನಡೆದಿದ್ದ ಈ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಏನಿದು ಪ್ರಕರಣ?
ಡಿಸೆಂಬರ್ 8, 1989 ರಂದು ಜೆಕೆಎಲ್ಎಫ್ ಭಯೋತ್ಪಾದಕರು ಅಂದಿನ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯ್ಯಾ ಸಯೀದ್ ಅವರನ್ನು ಅಪಹರಿಸಿದ್ದರು.
ಕೇಂದ್ರದಲ್ಲಿ ಆಗಿನ ಬಿಜೆಪಿ ಬೆಂಬಲಿತ ವಿ ಪಿ ಸಿಂಗ್ ಸರ್ಕಾರ ಐದು ಭಯೋತ್ಪಾದಕರನ್ನು ಬಿಡುಗಡೆ ಮಾಡಿದ ಬಳಿಕ ಅಪಹರಣದ ಐದು ದಿನಗಳ ನಂತರ ರುಬೈಯ್ಯಾ ಸಯೀದ್‌ರನ್ನು ಬಿಡುಗಡೆ ಮಾಡಿದ್ದರು. ಈಗ ಅವರು ತಮಿಳುನಾಡಿನಲ್ಲಿ ವಾಸಿಸುತ್ತಿದ್ದಾರೆ. 1990ರ ದಶಕದ ಆರಂಭದಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಯಾಸಿನ್ ಮಲಿಕ್, ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಮೇ 2023 ರಲ್ಲಿ ವಿಶೇಷ NIA ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿದ್ದಾನೆ.

