ಹೊಸದಿಗಂತ ವರದಿ ಕಲಬುರಗಿ:
ಇದೇ ಮುಂಬರುವ ಸೆಪ್ಟೆಂಬರ್ 17ರಂದು ಸಂಜೆ 4 ಗಂಟೆಗೆ ಕಲಬುರಗಿ ನಗರದಲ್ಲಿ 2024-25ನೇ ಸಾಲಿನ 19ನೇ ಸಚಿವ ಸಂಪುಟ ಸಭೆಯನ್ನು ನಡೆಸಲಾಗುವುದು ಎಂದು ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.
ಸೆಪ್ಟೆಂಬರ್ ಸಂಜೆ 4 ಗಂಟೆಗೆ ಮಿನಿ ವಿಧಾನಸೌಧದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದಲ್ಲಿ 19ನೇ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯ ವಿಷಯಗಳನ್ನು ವಿಶೇಷವಾಗಿ ಪರಿಗಣಿಸಲಾಗುವುದು ಎಂದು ಸೂಚನಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ.