ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮೊಹಾಲಿಯಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಮೊದಲ ಏಕದಿನ ಪಂದ್ಯ ನಡೆಯುತ್ತಿದ್ದು, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಡಿಮೆ ಇದೆ.
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್‌ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಸಂಜೆ ಪಂದ್ಯ ಆರಂಭವಾಗಲಿದೆ.
ಇಂದು ಮಧ್ಯರಾತ್ರಿ ವೇಳೆಗೆ ಮೊಹಾಲಿಯಲ್ಲಿ ಮಳೆ ಸುರಿಯಲಿದ್ದು, ಸಂಜೆ ವೇಳೆಗೆ ಮೋಡ ಮುಸುಕಿದ ವಾತಾವರಣ ಆಗುವ ಸಾಧ್ಯತೆ ಇದೆ. ಈ ಪಂದ್ಯಕ್ಕೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗಲಿದ್ದು, ಮಳೆ ಬರುತ್ತದೋ ಇಲ್ಲವೋ ಕಾದುನೋಡಬೇಕಿದೆ.