Wednesday, July 6, 2022

Latest Posts

2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಮಾಜಿ ಮೇಯರ್ ಸಂಪತ್ ರಾಜ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದು, ಮಂಗಳವಾರ ಸಂಜೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತ ಸಿವಿಲ್ ನ್ಯಾಯಪೀಠವು, 2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ.
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದಂತ ಮಾಜಿ ಮೇಯರ್ ಸಂಪತ್ ರಾಜ್, ಕೊರೋನಾ ಸೋಂಕು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ, ಅಲ್ಲಿಂದ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದರು. ಇಂತಹ ಸಂಪತ್ ರಾಜ್ ಬಂಧನ ಕುರಿತಂತೆ ಹೈಕೋರ್ಟ್ ಪೊಲೀಸರಿಗೆ ಚಾಟಿ ಬೀಸಿತ್ತು. ನಿನ್ನೆ ರಾತ್ರಿ ಸ್ನೇಹಿತನ ಮನೆಗೆ ಬಂದಿದ್ದ ಸಂಪತ್ ರಾಜ್ ಅವರನ್ನು ಪೊಲೀಸರು ಸೆರೆಹಿಡಿದು ಇಂದು ಕೋರ್ಟ್ ಗೆ ಹಾಜರು ಪಡಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದಂತ 67ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶರು, ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ, ಆದೇಶಿಸಿದ್ದಾರೆ. ಹೀಗಾಗಿ ಮಾಜಿ ಮೇಯರ್ ಸಂಪತ್ ರಾಜ್ ಜೈಲು ಸೇರುವಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss