Saturday, August 13, 2022

Latest Posts

2 ಪದವೀಧರ, 2 ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಗೆ ದಿನಾಂಕ ಫಿಕ್ಸ್: ಅ.28ಕ್ಕೆ ಮತದಾನ, ನ.2ಕ್ಕೆ ಮತಏಣಿಕೆ

ಬೆಂಗಳೂರು: ರಾಜ್ಯದ ವಿಧಾನಪರಿಷತ್‌ನ 2 ಪದವೀಧರರ ಕ್ಷೇತ್ರಗಳು ಹಾಗೂ 2 ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಅಕ್ಟೋಬರ್‌ 28 ರಂದು ಈ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನವೆಂಬರ್‌ 2ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಅವಧಿಯು ಜೂನ್ ಗೆ ಮುಕ್ತಾಯವಾಗಿದ್ದು, ಕೋವಿಡ್‌ನಿಂದಾಗಿ ಚುನಾವಣೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಿತ್ತು.
ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಚುನಾವಣಾ ಆಯೋಗವು, ಅಕ್ಟೋಬರ್ 01 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದೆ.ಅ . 8 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ . 9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ . ಅ. 12 ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಅ . 28 ರಂದು ಬೆಳಿಗ್ಗೆ 8ರಿಂದ ಸಂಜೆ 5ಗಂಟೆಯವರೆಗೆ ಮತದಾನ ನಡೆಯಲಿದೆ. ನವೆಂಬರ್‌ 2ಕ್ಕೆ ಮತ ಏಣಿಕೆ ನಡೆಯಲಿದೆ ಎಂಬುದಾಗಿ ಪ್ರಕಟಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss