2022ರಲ್ಲಿ ತಿರುಪತಿ ದೇವಾಲಯಕ್ಕೆ 2.37 ಕೋಟಿ ಭಕ್ತರ ಭೇಟಿ, 1,450 ಕೋಟಿ ರೂ. ಸಂಗ್ರಹ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಪತಿ ದೇವಾಲಯ ಹುಂಡಿಯಿಂದಲೇ 1,450.50 ಕೋಟಿ ರೂ.ಆದಾಯ ಸಂಗ್ರಹಿಸಿದೆ.

ಈ ಕುರಿತು ಮಾಹಿತಿ ನೀಡಿದ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ, 2022ರಲ್ಲಿ ದೇವಸ್ಥಾನಕ್ಕೆ 2.37 ಕೋಟಿ ಭಕ್ತರು ಭೇಟಿ ನೀಡಿದ್ದು, ಹುಂಡಿ ಸಂಗ್ರಹವು 1,450.50 ಕೋಟಿ ರೂ. ಆಗಿದೆ ಎಂದು ತಿಳಿಸಿದ್ದಾರೆ.

2021 ರಲ್ಲಿ 1.04 ಕೋಟಿ ಭಕ್ತರು ಭೇಟಿ ನೀಡಿ 833.41 ಕೋಟಿ ರೂ. ಹುಂಡಿ ಸಂಗ್ರಹವಾಗಿತ್ತು. 2021 ಮತ್ತು 2022ರ ಆರಂಭದಲ್ಲಿ ಕೋವಿಡ್‌ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಇಳಿಕೆಯಾಗಿತ್ತು.

ಆದ್ರೂ ಡಿಸೆಂಬರ್ ತಿಂಗಳೊಂದರಲ್ಲೇ 129.ಕೋಟಿ ರೂ. ಹುಂಡಿ ಸಂಗ್ರಹವಾಗಿತ್ತು. ಕಳೆದ ವರ್ಷ 11.54 ಲಕ್ಷ ಲಡ್ಡು ಪ್ರಸಾದ ಮಾರಾಟ ಮಾಡಿದ್ದರೆ 2021ರಲ್ಲಿ 5.96 ಲಕ್ಷ ಇತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!