Sunday, June 26, 2022

Latest Posts

ಭಾರತದಲ್ಲಿ ನಿತ್ಯದ ಕೋವಿಡ್ ಪ್ರಕರಣಗಳಲ್ಲಿ ಶೇ.2.4ರಷ್ಟು ಬೆಳವಣಿಗೆ: ಕೇಂದ್ರ ಆರೋಗ್ಯ ಸಚಿವಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ನಿತ್ಯದ ಕೋವಿಡ್ ಪ್ರಕರಣಗಳಲ್ಲಿ ಶೇ.2.4ರಷ್ಟು ಬೆಳವಣಿಗೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.
ಇದರ ಜೊತೆಗೆ ದೇಶದಲ್ಲಿ ಸಾವಿನ ಹೆಚ್ಚಳವೂ ಕಂಡು ಬಂದಿದ್ದು, ಮಹಾರಾಷ್ಟ್ರ, ಆಂಧ್ರಪ್ರದೇಶ, ದೆಹಲಿ, ಕರ್ನಾಟಕ, ಹರ್ಯಾಣದಲ್ಲಿ ಹೆಚ್ಚಿನ ಸಾವು ಸಂಭವಿಸಿರುವ ವರದಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಮ್ಮ ತಾಂತ್ರಿಕ ವಿಭಾಗದ ವಿಭಾಗವು ಕೆಲವು ಮಾರ್ಗಸೂಚಿಯನ್ನು ಮಾಡಿದೆ. ಯಾವ ಆಸ್ಪತ್ರೆಗೆ ಸೂಕ್ತವಾಗಿದೆ ಎಂಬುದನ್ನು ಗಮನಿಸಲಾಗುತ್ತದೆ. ತಕ್ಷಣಕ್ಕೆ ಅಗತ್ಯವಿರುವ ಆಸ್ಪತ್ರೆಗೆ ಕಳುಹಿಸಲಾಗುತ್ತದೆ ಎಂದರು.
ಭಾರತದಲ್ಲಿ ಕೊರೋನಾ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,82 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ 3,82,315 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 3,780 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,26,188ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,87,229ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss