ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ನಟಿಯರಾದ ತಮನ್ನಾ ಭಾಟಿಯಾ ಹಾಗೂ ಕಾಜಲ್ ಅಗರ್ವಾಲ್ ಅವರನ್ನು ವಿಚಾರಣೆ ನಡೆಸಲು ಪುದುಚೇರಿ ಪೊಲೀಸರು ನಿರ್ಧರಿಸಿರುವುದಾಗಿ ವರದಿಯಾಗಿದೆ.
ಬಹುಭಾಷೆಗಳಲ್ಲಿ ಸ್ಟಾರ್ ತಾರೆಯರಾಗಿರುವ ತಮನ್ನಾ ಭಾಟಿಯಾ ಹಾಗೂ ಕಾಜಲ್ ಅಗರ್ವಾಲ್ ಇಬ್ಬರನ್ನು ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.
ಕೊಯಮತ್ತೂರು ಮೂಲದ ಕ್ರಿಪ್ಟೋಕರೆನ್ಸಿ ಕಂಪನಿ ಹೆಚ್ಚಿನ ಲಾಭದ ಭರವಸೆ ನೀಡಿ ಜನರನ್ನು ವಂಚಿಸಲಾಗುತ್ತಿದೆ ಎಂದು ಪೊಲೀಸರಿಗೆ ದೂರು ಬಂದಿತ್ತು. ನಿವೃತ್ತ ಸರ್ಕಾರಿ ಉದ್ಯೋಗಿ ಅಶೋಕ್ ಎಂಬವರು ಪೊಲೀಸರಿಗೆ ದೂರು ನೀಡಿದ್ದರು.
ಲಾಭಗಳಿಸುವ ಭರವಸೆ ನೀಡಿದ 10 ಜನರಿಂದ 2.40 ಕೋಟಿ ರೂ.ಗಳನ್ನು ಕಂಪನಿ ಸಂಗ್ರಹಿಸಿದೆ ಎಂದು ಆರೋಪಿಸಿದ್ದರು. ಈ ಕಂಪನಿಯ ಕಾರ್ಯಕ್ರಮಗಳಲ್ಲಿ ತಮನ್ನಾ, ಕಾಜಲ್ ಅಗರ್ವಾಲ್ ಭಾಗವಹಿಸಿದ್ದ ಕಾರಣಕ್ಕೆ ಅವರ ವಿರುದ್ಧವೂ ದೂರು ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.