ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ರೋಹ್ಟಕ್‌ನಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.6 ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು, ಭಾನುವಾರ ರಾತ್ರಿ 11:26ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.
ಕಂಪನ ಬಿಂದುವನ್ನು ಭೂಮಿಯ ಮೇಲ್ಮೈಯಿಂದ 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ.
ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.