ರಾಯಚೂರಿನಲ್ಲಿ ಲಘು ಭೂಕಂಪ: 2.7 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪವಾಗಿದ್ದು, ರಿಕ್ಟರ್‌ ಮಾಪಕದಲ್ಲಿ 2.7 ತೀವ್ರತೆ ದಾಖಲಾಗಿದೆ.

ನಿನ್ನೆ ಮಧ್ಯರಾತ್ರಿ ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಆದರೆ ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!