ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ನಗದು ಜಪ್ತಿ

ದಿಗಂತ ವರದಿ ವಿಜಯಪುರ:

ಲೋಕಸಭಾ ಚುನಾವಣೆ ಹಿನ್ನೆಲೆ ತಪಾಸಣೆ ವೇಳೆ, ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಟೋಯೊಟಾ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ನಗದನ್ನು ನಗರದ ಸಿಂದಗಿ ಬೈಪಾಸ್ ಬಳಿ ಪೊಲೀಸರು ಜಪ್ತಿ ಮಾಡಿರುವ ಘಟನೆ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಾಜಿ ನಿಕ್ಕಂ, ಸಚಿನ್ ಮೋಯಿತೆ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 2 ಕೋಟಿ 93 ಲಕ್ಷದ 50 ಸಾವಿರ ನಗದು, ಟೋಯೋಟಾ ಕಾರು, ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ. ಈ ಕುರಿತು ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!