ಹೊಸದಿಗಂತ ವರದಿ, ಮೈಸೂರು:
ವ್ಯಾನ್ ವೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸರಗೂರಿನಲ್ಲಿ ನಡೆದಿದೆ.
ಬಂಧಿತರಿoದ 1160 ಪೌಚ್ಗಳಿರುವ 16 ಮದ್ಯದ ಬಾಕ್ಸ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳಿಗೆ ಮಾರುತಿ ವ್ಯಾನ್ ಮೂಲಕ ಆರೋಪಿಗಳು ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದರು. ಈ ವೇಳೆ ಎಎಸ್ಪಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಸೆರೆಹಿಡಿದ್ದಾರೆ.
ದಾಳಿಯಲ್ಲಿ ಸಿಪಿಐ ಪುಟ್ಟಸ್ವಾಮಿ, ಸಿಬ್ಬಂದಿ ಶ್ರೀನಿವಾಸ್, ದೀಪು ಇತರರು ಪಾಲ್ಗೊಂಡಿದ್ದರು.