ಹೊಸದಿಗಂತ ವರದಿ, ಕುಶಾಲನಗರ:
ಆಟೋದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಕುಶಾಲನಗರ ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೆಕೂಡಿಗೆ ಶಾಲೆ ಮುಂಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಗ್ರಾಮಾಂತರ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಅವರ ಬಳಿ ಇದ್ದ 265 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಆಟೋವನ್ನು ವಶಪಡಿಸಿಕೊಂಡಿದ್ದಾರೆ. ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ಅವರ ಸಮಕ್ಷಮದಲ್ಲಿ ಮಹಜರು ನಡೆಸಲಾಯಿತು. ಈ ಸಂದರ್ಭ ಕುಶಾಲನಗರದ ಗ್ರಾಮಾಂತರ ಪೋಲಿಸ್ ಠಾಣಾಧಿಕಾರಿ ಶಿವಶಂಕರ್, ಕೂಡಿಗೆ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಗ್ರಾಮ ಪಂಚಾಯತಿ ಕಂದಾಯ ವಸೂಲಿಗಾರ ಅನಿಲ್, ಪೊಲೀಸ್ ಸಿಬ್ಬಂದಿಗಳಾದ ಶ್ರೀನಿವಾಸ, ಮಂಜುನಾಥ,ಸನತ್, ಚಾಲಕ ಯೋಗೇಶ್ ಇದ್ದರು
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ