ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ದೆಹಲಿಯ ರಕಾಬ್ ಗಂಜ್ʼನ ಗುರುದ್ವಾರದಲ್ಲಿ ಸಿದ್ಧವಾಗುತ್ತಿರುವ ಕೊವೀಡ್ ಕೇರ್ ಕೇಂದ್ರಕ್ಕೆ 2 ಕೋಟಿ ರೂ ದೇಣಿಗೆ ನೀಡಿದ್ದಾರೆ.
ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಅಧ್ಯಕ್ಷ ಮಂಜಿಂದರ್ ಸಿಂಗ್ ಸಿರ್ಸಾ ಈ ವಿಚಾರವನ್ನ ತಿಳಿಸಿದ್ದು, ರಕಾಬ್ ಗಂಜ್ನ ಗುರುದ್ವಾರದಲ್ಲಿ ಕೇರ್ ಸೆಂಟರ್ ತೆರೆಯಲಾಗುತ್ತಿದ್ದು 300 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ಕುರಿತು ಅಮಿತಾಬ್ ತಮ್ಮ ಬ್ಲಾಗ್ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ‘ಸಾರ್ವಜನಿಕವಾಗಿ ಇದನ್ನ ಮಾತನಾಡಿ ಈ ಸಂದರ್ಭದಲ್ಲಿ ಪ್ರಚಾರ ಪಡೆದುಕೊಳ್ಳುವುದು ಬೇಡ ಎಂದು ಎನಿಸಿತು ಎಂದಿದ್ದಾರೆ.