ಒಡಿಶಾದ ಮಹಾನದಿಯಲ್ಲಿ ದೋಣಿ ಮಗುಚಿ ಇಬ್ಬರು ಸಾವು: 7 ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಡಿಶಾದ ಮಹಾನದಿಯಲ್ಲಿ ಶುಕ್ರವಾರ ದೋಣಿ ಮಗುಚಿಬಿದ್ದು, ಇಬ್ಬರು ಮೃತಪಟ್ಟಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ.

ಪಥರ್ಸೇನಿ ಕುಡಾದಿಂದ ಬಂಜಿಪಲ್ಲಿಗೆ ತೆರಳುತ್ತಿದ್ದ, 50 ಜನರನ್ನು ಹೊತ್ತಿದ್ದ ದೋಣಿಯು ಸರದಾ ಘಾಟ್‌ ಬಳಿ ಮುಳುಗಡೆಯಾಗಿದೆ ಎಂದು ಪೊಲೀಸರು‌ ತಿಳಿಸಿದ್ದಾರೆ.

ಸ್ಥಳೀಯ ಮೀನುಗಾರರು 35 ಪ್ರಯಾಣಿಕರ‌ನ್ನು ರಕ್ಷಿಸಿದ್ದು, ಬಳಿಕ ಆಗಮಿಸಿದ ರಕ್ಷಣಾ ಸಿಬ್ಬಂದಿ 7 ಜನ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ್ದಾರೆ.
7 ಜನ ಪ್ರಯಾಣಿಕರು ನಾಪತ್ತೆಯಾಗಿದ್ದು, ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!