Sunday, August 14, 2022

Latest Posts

ದ್ವಿಚಕ್ರ ವಾಹನದ ಮೇಲೆ ಹರಿದ ಟಿಪ್ಪರ್: ಬೈಕ್ ಸವಾರರಿಬ್ಬರ ದುರ್ಮರಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ದ್ವಿಚಕ್ರ ವಾಹನದ ಮೇಲೆ ಟಿಪ್ಪರ್ ಹರಿದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿಯ ಸಂಪಿಗೆಕಟ್ಟೆ ಬಳಿ ನಡೆದಿದೆ.
ಮೈಸೂರು ಮೂಲದ ವಿಶ್ವನಾಥ್ ಹಾಗೂ ದಿನೇಶ್ ಮೃತ ದುರ್ದೈವಿಗಳು.
ವಿಶ್ವನಾಥ್ ಅವರು ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯನ್ನು ಮಡಿಕೇರಿಯಲ್ಲಿರುವ ಸಂಬಂಧಿಕರಿಗೆ ನೀಡಲೆಂದು ಬೈಕ್ ನಲ್ಲಿ ಸಂಬಂಧಿ ದಿನೇಶ್ ಅವರೊಂದಿಗೆ ಬರುತ್ತಿದ್ದಾಗ ದುರ್ಘಟನೆ ನಡೆದಿದೆ.
ಮಂಜು ಮುಸುಕಿದ ವಾತಾವರಣದ ನಡುವೆ ಲಾರಿಯನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡ ಬೈಕ್ ಕೆಳಗೆ ಬಿದ್ದಿದೆ. ಈ ಸಂದರ್ಭ ಲಾರಿ ಇಬ್ಬರ ಮೇಲೆ ಹರಿದಿದೆ ಎಂದು ಹೇಳಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss