ಏರ್‌ ಇಂಡಿಯಾ ಆಯ್ತು..ಇದೀಗ ಇಂಡಿಗೋ ಸರದಿ: ಕುಡಿದ ಮತ್ತಿನಲ್ಲಿ ಗಗನಸಖಿಯೊಂದಿಗೆ ಅನುಚಿತ ವರ್ತನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಲ ದಿನಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದು 70 ವರ್ಷದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಘಟನೆ ಮರೆಯುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಇಂಡಿಗೋ ವಿಮಾನದಲ್ಲಿ ಮದ್ಯ ಸೇವಿಸಿದ್ದ ಮೂವರು ಮನಬಂದಂತೆ ವರ್ತಿಸಿದ್ದು, ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ.

ಭಾನುವಾರ ದೆಹಲಿಯಿಂದ ಪಾಟ್ನಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಮೂವರು ಮದ್ಯ ಸೇವಿಸಿ ಗಗನಸಖಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ವಿಮಾನದ ಕ್ಯಾಪ್ಟನ್ ಮೇಲೂ ಹಲ್ಲೆ ನಡೆಸಿದ್ದಾರೆ. ಮದ್ಯ ವ್ಯಸನಿಗಳ  ಚೇಷ್ಟೆಯಿಂದ ಪ್ರಯಾಣಿಕರು ಭಯಭೀತರಾಗಿ ಏರ್ ಟ್ರಾಫಿಕ್ ಕಂಟ್ರೋಲರ್ ಗೆ ಮಾಹಿತಿ ನೀಡಿದ್ದಾರೆ. ಪಾಟ್ನಾ ಏರ್ ಪೋರ್ಟ್ ನಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಇಬ್ಬರನ್ನು ಸಿಐಎಸ್ಎಫ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಘಟನೆಯಲ್ಲಿ ಮತ್ತೊಬ್ಬರು ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪಾಟ್ನಾ ವಿಮಾನ ನಿಲ್ದಾಣದ ಎಸ್‌ಎಚ್‌ಒ ರಾಬರ್ಟ್ ಪೀಟರ್ ಹೇಳಿದ್ದಾರೆ. ದೆಹಲಿಯಿಂದ ಪಾಟ್ನಾಗೆ 6E 6383 ವಿಮಾನದಲ್ಲಿ ನಡೆದ ಘಟನೆಯ ಬಗ್ಗೆ ಇಂಡಿಗೋ ಆಡಳಿತವು ಅಧಿಕಾರಿಗಳೊಂದಿಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದೆ. ಆದರೆ, ಅದರ ಅಧಿಕೃತ ಟ್ವಿಟರ್ ಹ್ಯಾಂಡಲ್ ಸಾಮಾಜಿಕ ಮಾಧ್ಯಮದ ಕೆಲವು ವಿಭಾಗಗಳಲ್ಲಿ ವರದಿ ಮಾಡಿದಂತೆ ವಿಮಾನದಲ್ಲಿ ಯಾವುದೇ ವಾಗ್ವಾದ ನಡೆದಿಲ್ಲ ಎಂದು ಬಹಿರಂಗಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!