Monday, June 27, 2022

Latest Posts

ಅಸ್ಸಾಂನಲ್ಲಿ ನಿಲ್ಲದ ಪ್ರವಾಹ: 24 ಗಂಟೆಗಳಲ್ಲಿ ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಸ್ಸಾಂನಲ್ಲಿ ಪ್ರವಾಹದ ಪರಿಣಾಮ ಇನ್ನೂ ತಗ್ಗಿಲ್ಲ. ರಾಜ್ಯದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ಕಳೆದ 24 ಗಂಟೆಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 108ಕ್ಕೆ ಏರಿಕೆಯಾಗಿದೆ.

ಪ್ರವಾಹ ಸಂತ್ರಸ್ತರಿಗೆ ಆಶ್ರಯ ನೀಡಲು ಸರ್ಕಾರ 1,395 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಅಸ್ಸಾಂನ 35 ಜಿಲ್ಲೆಗಳಲ್ಲಿ 30 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಪರಿಣಾಮದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹಲವು ಟ್ವೀಟ್‌ ಮಾಡಿದ್ದಾರೆ. ʻಕೇಂದ್ರವು ಕಾಲಕಾಲಕ್ಕೆ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ ಮತ್ತು ವಾಯುಪಡೆ, ಸೇನೆ ಮತ್ತು ಎನ್‌ಡಿಆರ್‌ಎಫ್ ಪಡೆಗಳು ಸಂತ್ರಸ್ತರಿಗೆ ಸಹಾಯ ಮಾಡುತ್ತಿವೆʼ. ಸಿಎಂ ಹಿಮಂತಬಿಸ್ವಾ, ಅಸ್ಸಾಂ ಸರ್ಕಾರದ ಸಚಿವರು ಮತ್ತು ಅಧಿಕಾರಿಗಳು ಜಿಲ್ಲೆಗಳಲ್ಲಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ ಮತ್ತು ನೊಂದವರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ರಾಜ್ಯಕ್ಕೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದರು.

ಮತ್ತೊಂದೆಡೆ ರಾಜ್ಯದಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಬೇಸಿಗೆ ರಜೆಯಲ್ಲಿ ಬದಲಾವಣೆ ಮಾಡಿದೆ. ಜುಲೈ 1 ರಿಂದ ಪ್ರಾರಂಭವಾಗಿದ್ದ ಬೇಸಿಗೆ ರಜೆಯನ್ನು ಒಂದು ವಾರ ಮುಂಚಿತವಾಗಿ, ಅಂದರೆ ಜೂನ್ 25 ರಿಂದ ಜುಲೈ 25 ರವರೆಗೆ ರಜೆ ಘೋಷಣೆ ಮಾಡಿರುವುದಾಗಿ ರಾಜ್ಯ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಸ್ತುತ ಪ್ರವಾಹ ಪರಿಹಾರ ಕೇಂದ್ರಗಳಾಗಿವೆ. ಜೊತೆಗೆ ಹಲವಾರು ಸಾಲೆಗಳು ಪ್ರವಾಹದಿಂದ ಹಾನಿಗೊಳಗಾಗಿರುವ ಕಾರಣ ಶಾಲೆಗಳನ್ನು ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss