ಹೊಸದಿಗಂತ ಡಿಜಿಟಲ್ ಡೆಸ್ಕ್:
ನವದೆಹಲಿಯ ಗ್ರೇಟರ್ ಕೈಲಾಶ್-II ಪ್ರದೇಶದ ಹಿರಿಯ ನಾಗರಿಕರ ಕೇರ್ ಹೋಮ್‌ನಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತು ಆರು ಜನರನ್ನು ಇ ಬ್ಲಾಕ್ ಕಟ್ಟಡದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.
ಅಧಿಕಾರಿಗಳ ಪ್ರಕಾರ, ಬೆಳಿಗ್ಗೆ 5.15 ರ ಸುಮಾರಿಗೆ ಬೆಂಕಿಯ ಬಗ್ಗೆ ಕರೆ ಬಂದಿತು ಮತ್ತು ತಕ್ಷಣವೇ ನಾಲ್ಕು ಅಗ್ನಿಶಾಮಕ ಟೆಂಡರ್‌ಗಳನ್ನು ಬೆಂಕಿಯನ್ನು ನಂದಿಸಲು ನಿಯೋಜಿಸಲಾಯಿತು.
ಅಗ್ನಿಶಾಮಕ ದಳ ಮತ್ತು ಪೊಲೀಸರ ತಲಾ ಒಂದು ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ. ಇಬ್ಬರು ಸಾವನ್ನಪ್ಪಿದ್ದು, 13 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ದಕ್ಷಿಣ ದೆಹಲಿ ಉಪ ಪೊಲೀಸ್ ಆಯುಕ್ತರು ತಿಳಿಸಿದರು.