ದೆಹಲಿ ವಿಮಾನ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಐಜಿಐ) ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಬಳಿ ಈ ಘಟನೆ ನಡೆದಿದೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!