ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ಅನುದಾನ ನೀಡಲು ಕೇಂದ್ರ ಸರ್ಕಾರ ಸಿದ್ಧ: ನಿತಿನ್ ಗಡ್ಕರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ವಿವಿಧ ರಸ್ತೆ ಯೋಜನೆಗಳ ಅನುಷ್ಠಾನಕ್ಕಾಗಿ ಒಂದು ತಿಂಗಳೊಳಗೆ ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ನೀಡುವುದಕ್ಕೆ ಸಿದ್ಧವಿದೆ ಎಂದು ತಿಳಿಸಿದೆ.

ಆದರೆ, ಕಾಂಗ್ರೆಸ್ ಸರ್ಕಾರ ಅಗತ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಸಮಾರೋಪ ಸಮಾರಂಭದಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದನ್ನು ಹೇಳಿದ ಗಡ್ಕರಿ, ರಸ್ತೆ ಕಾಮಗಾರಿಗೆ ಒಂದು ತಿಂಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ನೀಡಲು ಸಿದ್ಧ ಎಂದು ಹೇಳಿದ್ದೆ. ಆದರೆ ಅವರಿಗೆ ನನ್ನ ಷರತ್ತೆಂದರೆ ಭೂಸ್ವಾಧೀನ ಮಾಡಿಕೊಳ್ಳುವುದು. ಅರಣ್ಯ ಇಲಾಖೆ ಮತ್ತಿತರ ಸಂಬಂಧಪಟ್ಟ ವಿಭಾಗಗಳಿಂದ ಅನುಮತಿ ಪಡೆಯುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!