ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದಲ್ಲಿ 2 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು.
ವಿಶಾಖಪಟ್ಟಣಂಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರೊಂದಿಗೆ ವಿವಿಧ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು.