Sunday, August 14, 2022

Latest Posts

ದೇಶದಲ್ಲಿ 2 ತಿಂಗಳು ಸಂಪೂರ್ಣ ಲಾಕ್ ಡೌನ್?: ಕೇಂದ್ರಕ್ಕೆ ಐಸಿಎಂಆರ್ ಕೊಟ್ಟ ಸಲಹೆ ಏನು?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕೆ 6-8 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಬೇಕು ಎಂದು ಐಸಿಎಂಆರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ, ದೇಶದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಯ ಅಗತ್ಯವಿದ್ದು, ಕೊರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು 6-8 ವಾರಗಳ ಕಾಲ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದರೆ ಮಾತ್ರ ಸೋಂಕಿತರ ಸಂಖ್ಯೆಯ ಜೊತೆಗೆ ಸಾವು-ನೋವಿನ ಪ್ರಮಾಣವನ್ನು ತಡೆಯಲು ಸಾಧ್ಯ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕೊರೋನಾ ಎರಡನೇ ಅಲೆಗೆ ಹೆಚ್ಚಾಗಿ ಯುವಕರು ಬಲಿಯಾಗುತ್ತಿದ್ದಾರೆ. 30 ವರ್ಷದ ಶೇ.32 ರಷ್ಟು ಯುವಕರಲ್ಲಿ ಪಾಸಿಟಿವ್ ಬರುತ್ತಿದ್ದು, ದೇಶದಲ್ಲಿ ಯುವಜನತೆ ಸೋಂಕಿಗೆ ತುತ್ತಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಅಪಾಯ ಕಟ್ಟಿಟ್ಟಬುತ್ತಿ. ಈ ನಿಟ್ಟಿನಲ್ಲಿ ಲಾಕ್ ಡೌನ್ ಜಾರಿ ಅಗತ್ಯವಿದೆ ಎಂದು ಹೇಳಿದ್ದಾರೆ.

ಇನ್ನು ಸೋಂಕಿತರ ಪ್ರಮಾಣ ಶೇ.10ಕ್ಕಿಂತ ಹೆಚ್ಚಿರುವ ನಗರ ಹಾಗೂ ಜಿಲ್ಲೆಗಳಲ್ಲಿ ಲಾಕ್ ಡೌನ್ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಲಾಕ್ ಡೌನ್ ಜಾರಿ ಮಾಡುವುದರಿಂದ ವ್ಯದ್ಯಕೀಯ ವ್ಯವಸ್ಥೆ ಮೇಲಿನ ಒತ್ತಡದ ಜೊತೆ ಸಾವಿನ ಪ್ರಮಾಣವನ್ನೂ ತಗ್ಗಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss