Friday, July 1, 2022

Latest Posts

ಎಲ್ಲಾ ಸರಕಾರಿ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಉದ್ಯೋಗ ಮೀಸಲಾತಿ: ಸಚಿವ ಕೆ.ಸಿ.ನಾರಾಯಣಗೌಡ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ದಾವಣಗೆರೆ:

ಸರ್ಕಾರದ ಎಲ್ಲಾ ಇಲಾಖೆಗಳ ಹುದ್ದೆ ನೇಮಕಾತಿಯಲ್ಲಿ ಇನ್ನು ಮುಂದೆ ಕ್ರೀಡಾಪಟುಗಳಿಗೆ ಶೇ.2ರಷ್ಟು ಉದ್ಯೋಗ ಮೀಸಲಾತಿ ನೀಡಲಿದ್ದೇವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಅದೇ ರೀತಿ ಎಲ್ಲಾ ಇಲಾಖೆಗಳಲ್ಲೂ ಶೇ.2 ಉದ್ಯೋಗ ಮೀಸಲಾತಿ ನೀಡಲಿದ್ದೇವೆ ಎಂದರು.
ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಬಾಲಕಿಯರ ಕ್ರೀಡಾ ವಸತಿ ನಿಲಯಗಳನ್ನು ಸ್ಥಾಪಿಸಲಿದ್ದೇವೆ. ಮುಂದಿನ ಒಲಂಪಿಕ್‌ಗೆ ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75
ಕ್ರೀಡಾಪಟುಗಳನ್ನು ತರಬೇತಿಗೆ ಆಯ್ಕೆ ಮಾಡಿದ್ದೇವೆ. ಆದಷ್ಟು ಬೇಗನೆ ಈ ಎಲ್ಲರಿಗೂ ವಿಶ್ವ ಮಟ್ಟದ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.
ಪದವಿ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಅದರಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರ ಹುದ್ದೆ ಭರ್ತಿ ಬಗ್ಗೆ ಅಧಿಸೂಚನೆಯಲ್ಲಿ ತಿಳಿಸಿಲ್ಲ. ದೈಹಿಕ ಶಿಕ್ಷಣ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದೇವೆ. ಸಿಎಸ್‌ಆರ್ ಫಂಡ್‌ನಲ್ಲಿ ಖಾಸಗಿ ಕಂಪನಿಗಳಿಂದ ಕ್ರೀಡಾಪಟುಗಳನ್ನು ದತ್ತು ಪಡೆದು, ತರಬೇತಿ ಕೊಡಿಸಲು ಆಲೋಚನೆ ಮಾಡಿದ್ದೇವೆ. ಇದರಿಂದ ಕ್ರೀಡಾಪಟುಗಳಿಗೂ ಉತ್ತಮ ತರಬೇತಿ, ಪ್ರೋತ್ಸಾಹ ಸಿಗಲಿದೆ ಎಂದು ಅವರು ವಿವರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss