2 ಸೈಟು ಕಿಕ್‌ಬ್ಯಾಕ್‌ ಆರೋಪ: ಜೆಡಿಎಸ್‌ ಶಾಸಕ ಜಿಟಿಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾದಲ್ಲಿ 50:50 ಭೂ ಮಂಜೂರಾತಿಗೆ ಸಂಬಂಧಿಸಿದಂತೆ ಮತ್ತೊಬ್ಬ ರಾಜಕಾರಣಿ ವಿರುದ್ಧ ಸಿಎಂ ನಂತರ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.

ಹೌದು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು 50-50 ಷಡ್ಯಂತ್ರದಲ್ಲಿ ಪ್ರಭಾವ ಬೀರಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಪ್ರಕರಣಕ್ಕೆ ಸೇರಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಜಿ.ಟಿ ದೇವೇಗೌಡರ ಪ್ರಭಾವ ಬಳಸಿ ಚೌಡಯ್ಯ ಎಂಬವರ ಹೆಸರಿಗೆ 44,736 ಚದರ ಅಡಿ ಜಾಗದ 6 ನಿವೇಶನ ಕೊಡಿಸಿದ್ದಾರೆ. ಅದರಲ್ಲಿ ಕಿಕ್‌ಬ್ಯಾಕ್‌ ರೂಪದಲ್ಲಿ 2 ನಿವೇಶನ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!