Wednesday, September 28, 2022

Latest Posts

ಮಥುರಾದಲ್ಲಿ ಭಕ್ತರ ದಂಡು: ಉಸಿರುಗಟ್ಟಿ ಇಬ್ಬರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೃಷ್ಣ ಜನ್ಮಾಷ್ಟಮಿ ವೇಳೆ ಭಗವಾನ್ ಕೃಷ್ಣನ ಜನ್ಮಸ್ಥಳ ಎಂದೇ ಕರೆಯಲಾಗುವ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಇಲ್ಲಿನ ವೃಂದಾವನದಲ್ಲಿರುವ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಜನ್ಮಾಷ್ಟಮಿ ಆಚರಣೆಗಳು ಅದ್ಧೂರಿಯಾಗಿ ನಡೆಯುತ್ತವೆ. ಶುಕ್ರವಾರ ಮಧ್ಯರಾತ್ರಿ ನಡೆದ ಹಾರತಿಗೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರು. ಒಂದೇ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರಿಂದ ನೂಕುನುಗ್ಗಲು ಉಂಟಾಯಿತು. ಪರಸ್ಪರ ತಳ್ಳಾಟ-ನೂಕಾಟ ಉಂಟಾಯಿತು. ಈ ಸಂದರ್ಭದಲ್ಲಿ ಉಸಿರುಗಟ್ಟಿ ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ. ಅವರಲ್ಲಿ ಒಬ್ಬರು ಮಹಿಳೆ ಮತ್ತು ಇನ್ನೊಬ್ಬರು ಪುರುಷ. ಘಟನೆಯಲ್ಲಿ ಇತರ ಆರು ಮಂದಿ ಗಾಯಗೊಂಡಿದ್ದಾರೆ.

ಅಧಿಕಾರಿಗಳು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಎರಡು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ, ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!