Monday, July 4, 2022

Latest Posts

ಕಾಶ್ಮೀರದ ಪುಲ್ವಾಮದಲ್ಲಿ ಇಬ್ಬರು ಜೈಶೆ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಮಿತ್ರಿಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಪುಲ್ವಾಮಾದ ಮಿತ್ರಿಗಾಮ್ ಎಂಬ ಪ್ರದೇಶದಲ್ಲಿ ಉಗ್ರರು ಅವಿತಿರುವ ಮಾಹಿತಿ ಪಡೆದ ಭದ್ರತಾ ಪಡೆಗಳು ಬುಧವಾರ ಕಾರ್ಯಾಚರಣೆ ನಡೆಸಿ ಒರ್ವ ಉಗ್ರನನ್ನು ಹೊಡೆದುರುಳಿಸಿದ್ದವು. ಕಾರ್ಯಾಚರಣೆ ಇಂದೂ(ಗುರುವಾರ) ಸಹ ಮುಂದುವರೆದಿದ್ದು ಮತ್ತೊರ್ವ ಉಗ್ರನನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಹತರಾದ ಇಬ್ಬರೂ ಭಯೋತ್ಪಾದಕರು 2022 ರ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಕಣಿವೆ ರಾಜ್ಯದಲ್ಲಿ ನಡೆದ ವಲಸೆ ಕಾರ್ಮಿಕರ ಮೇಲೆ ಸರಣಿ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ಹೇಳಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರನ್ನು ಐಜಾಜ್ ಹಫೀಜ್ ಮತ್ತು ಶಾಹಿದ್ ಅಯೂಬ್ ಎಂದು ಗುರುತಿಸಲಾಗಿದ್ದು, ಜೈಶ್-ಎ-ಮೊಹಮ್ಮದ್ (ಜೆಎಂ) ಸಂಘಟನೆಗೆ ಸೇರಿದವರು. ಇವರಿಬ್ಬರೂ ಪಾಕಿಸ್ತಾನಿ ಭಯೋತ್ಪಾದರು ಎಂದು ವಿಜಯ್‌ ಕುಮಾರ್‌ ತಿಳಿಸಿದ್ದಾರೆ. ಪೊಲೀಸರು ಉಗ್ರರಿಂದ ಎರಡು ಎಕೆ 47 ರೈಫಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಒರ್ವ ಉಗ್ರ ಅವಿತಿರುವ ಶಂಕೆಯಿದ್ದು ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss