Saturday, July 2, 2022

Latest Posts

ಕೊಡಗು| ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ ವಿತರಣೆ

ಹೊಸದಿಗಂತ ವರದಿ, ಕೊಡಗು:

ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ಶನಿವಾರ ನಗರದಲ್ಲಿ ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮುದ್ದಣ್ಣ ಅವರ ಸಮ್ಮುಖದಲ್ಲಿ 2020-21 ಸಾಲಿನಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ನೀಡಲಾಯಿತು.
ಈ ಸಂದರ್ಭ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ, ನಿರೂಪಣಾಧಿಕಾರಿ ಪೂಣಚ್ಚ, ಜಿಲ್ಲಾ ದಿವ್ಯಾಂಗ ಒಕ್ಕೂಟ ಅಧ್ಯಕ್ಷ ಮಹೇಶ್ವರ, ಉಪಾಧ್ಯಕ್ಷೆ ಆಯಿಷಾ, ಕಾರ್ಯದರ್ಶಿ ಲೋಹಿತ್, ವಿಕಲಚೇತನ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss