ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಹುದ್ದೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಮಾರಾಮಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೋಯ್ಡಾದ ಹೈಡ್ ಪಾರ್ಕ್ ಸೊಸೈಟಿಯ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ (ಎಒಎ) ಅಧ್ಯಕ್ಷ ಹುದ್ದೆಗೆ ಅಭ್ಯರ್ಥಿಗಳನ್ನು ಬೆಂಬಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಗಂಭೀರ  ಗಾಯಗೊಂಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕೆಲವರು ಹೊಡೆದಾಡಿಕೊಳ್ಳುತ್ತಿದ್ದು, ಸೆಕ್ಯೂರಿಟಿ ಸಿಬ್ಬಂದಿ ಅವರನ್ನು ತಡೆಯಲು ಯತ್ನಿಸುತ್ತಿದ್ದಾರೆ. ಪ್ರತಿಭಟನಾನಿರತ ಮಹಿಳೆಯರು ಮಹಿಳಾ ಕಾವಲುಗಾರ್ತಿಯೊಬ್ಬರ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಕಂಡುಬಂದಿದೆ.

ಗೌತಮ್ ಬುದ್ಧ ನಗರ ಪೊಲೀಸರ ಪ್ರಕಾರ, ಎಒಎ ಅಧ್ಯಕ್ಷರ ಹುದ್ದೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಸೆಕ್ಟರ್ -113 ವ್ಯಾಪ್ತಿಯಲ್ಲಿರುವ ಹೈಡ್ ಪಾರ್ಕ್ ಸೊಸೈಟಿಯಲ್ಲಿ ಎರಡು ಪಕ್ಷಗಳ ನಡುವೆ ವಿವಾದ ನಡೆಯುತ್ತಿದ್ದು, ಈ ಬಗ್ಗೆ ಸಿಆರ್‌ಪಿಸಿ ಸೆಕ್ಷನ್ 107/116 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತರ ದೂರಿನ ಮೇರೆಗೆ ಅಗತ್ಯ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಇಬ್ಬರು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಿಸಿಟಿವಿಗಳನ್ನು ವೀಕ್ಷಿಸುತ್ತಿದ್ದಾರೆ. ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!