ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಕಾಮಗಾರಿ ನಡೆಸಿದ್ದ ಗುಂಡಿಗೆ ಎರಡು ವರ್ಷದ ಮಗುವೊಂದು ಬಿದ್ದು ಮೃತಪಟ್ಟಿರುವ
ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಮೃತ ಮಗುವನ್ನು ಉತ್ತರಪ್ರದೇಶ ಮೂಲದ ಹನುಮಾನ್ ದಂಪತಿಯ ಪುತ್ರ ಕಾರ್ತಿಕ್ ಎಂದು ಗುರುತಿಸಲಾಗಿದೆ.
ಕಾಮಗಾರಿಗಾಗಿ ಹೊಂಡ ತೆಗೆದಿದ್ದ ಜಲಮಂಡಳಿಯು ಅದನ್ನು ಮುಚ್ಚದೇ ಹಾಗೆ ಬಿಟ್ಟಿತ್ತು. ಆಟವಾಡುತ್ತಾ ಹೊಂಡದ ಬಳಿ ಹೋದ ಮಗು ಕಾಲು ಜಾರಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ.
ಜಲಮಂಡಳಿ ನಿರ್ಲಕ್ಷ್ಯದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಜಿನಿಯರ್ ಹಾಗೂ ಕಾಂಟ್ರ್ಯಾಕ್ಟರ್ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ರಾಠೆಯಲ್ಲಿ ದೂರು ದಾಖಲಾಗಿದೆ.