ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಸ್ ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಭಸ್ಮವಾಗಿರುವ ಘಟನೆ ಸೋಮವಾರ ನಡೆದಿತ್ತು. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಎಆರ್ (ಫೈರ್ ಆಕ್ಸಿಡೆಂಟಲ್ ರಿಪೋರ್ಟ್) ದಾಖಲಿಸಿಕೊಂಡಿದ್ದಾರೆ.
ಹೊಸಕೆರೆಹಳ್ಳಿಯ ವೀರಭದ್ರನಗರದ ಸಮೀಪದಲ್ಲಿರುವ ಎಸ್‌ವಿ ಕೋಚ್ ಬಸ್ ಬಾಡಿಬಿಲ್ಡರ್ಸ್ ಮತ್ತು ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 20ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಭಸ್ಮವಾಗಿದ್ದವು.
ಎಫ್‌ಎಆರ್ ದಾಖಲಿಸಿಕೊಂಡ ಬಳಿಕ ಪೊಲೀಸರು ಘಟನೆಯ ಕುರಿತು ತನಿಖೆ ಕೈಗೆತ್ತುಕೊಂಡಿದ್ದು, ತನಿಖೆಯ ಬಳಿಕವಷ್ಟೇ ಅವಘಡದ ಹಿಂದಿನ ಕಾರಣಗಳು ತಿಳಿದು ಬರಲಿದೆ.