ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡು ಮೂಲದ ಔಷಧ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಛಿಂದ್ವಾರ ಎಸ್ಪಿ ಪ್ರಕಾರ, ರಂಗನಾಥನ್ ಅವರನ್ನು ಇಂದು ಚೆನ್ನೈ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಮತ್ತು ಟ್ರಾನ್ಸಿಟ್ ರಿಮಾಂಡ್ ಪಡೆದ ನಂತರ ಚಿಂದ್ವಾರಕ್ಕೆ ಕರೆತರಲಾಗುವುದು ಎಂದು ತಿಳಿಸಿದ್ದಾರೆ.
ಮಧ್ಯಪ್ರದೇಶದ ಛಿಂದ್ವಾರಾ ಪೊಲೀಸರು ರಂಗನಾಥನ್ ಹಿಡಿದುಕೊಟ್ಟವರಿಗೆ 20 ಸಾವಿರ ನೀಡುವುದಾಗಿ ಘೋಷಿಸಿದ್ದರು, ಇದಾದ ಕೆಲವೇ ಗಂಟೆಗಳಲ್ಲಿ ಬಂಧನವಾಗಿದೆ.
ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ರಾಜೇಂದ್ರ ಶುಕ್ಲಾ ಬುಧವಾರ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ 20 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ; ಈ ಮಧ್ಯೆ, ಐದು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ 20 ಮಕ್ಕಳಲ್ಲಿ 17 ಮಕ್ಕಳು ಚಿಂದ್ವಾರ ಜಿಲ್ಲೆಯವರು, ಇಬ್ಬರು ಬೇತುಲ್ ಜಿಲ್ಲೆಯವರು ಮತ್ತು ಒಬ್ಬರು ಪಂಧುರ್ನ ಜಿಲ್ಲೆಯವರು ಎನ್ನಲಾಗಿದೆ.