ರಷ್ಯಾದಲ್ಲಿ ಭೀಕರ ಅಗ್ನಿ ಅವಘಡ: 20 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಸೈಬೀರಿಯಾದ ಕೆಮೆರೊವೊ ನಗರದಲ್ಲಿ ವೃದ್ಧರು ವಾಸವಿದ್ದ ನೋಂದಾಯಿಸದ ಮನೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ.
ಕಟ್ಟಡದ ಎರಡನೇ ಮಹಡಿ ಸಂಪೂರ್ಣ ಸುಟ್ಟುಹೋಗಿದೆ ಎಂದು ಅಗ್ನಿಶಾಮಕ ಸುರಕ್ಷತಾ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಆ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆ. “ಬೆಂಕಿ ಅನಾಹುತದಿಂದ ಸಂತ್ರಸ್ತರನ್ನು ರಕ್ಷಿಸುವ ಕಾರ್ಯ ನಡೆದಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, 20 ಜನರು ಸಾವನ್ನಪ್ಪಿದ್ದಾರೆ” ಎಂದು ವರದಿ ಹೇಳಿದೆ.
ವಯೋವೃದ್ಧರಿಗಾಗಿ ಅನೇಕ ಮನೆಗಳು ರಷ್ಯಾದಾದ್ಯಂತ ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ. ಅವುಗಳನ್ನು ಅಧಿಕೃತವಾಗಿ ಖಾಸಗಿ ಆಸ್ತಿ ಎಂದು ಪರಿಗಣಿಸಲಾಗಿರುವುದರಿಂದ ತಪಾಸಣೆಗೆ ಒಳಪಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!