ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಶುಕ್ರವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದ ವಿಷಯ ತಿಳಿದ ದೆಹಲಿ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಆಸ್ಪತ್ರೆಯಲ್ಲಿ 20 ನವಜಾತ ಶಿಶುಗಳನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
20 ನವಜಾತ ಶಿಶುಗಳನ್ನು ಆರ್ಯ ಆಸ್ಪತ್ರೆ, ಜೆಕೆ ಆಸ್ಪತ್ರೆ, ದ್ವಾರಕಾ ಮತ್ತು ಜನಕಪುರಿಯಲ್ಲಿರುವ ನವಜಾತ ಮಕ್ಕಳ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಬೆಂಕಿಗೆ ಕಾರಣ ತಿಳಿದುಬಂದಿಲ್ಲ. ದೆಹಲಿ ಪೊಲೀಸರು ಆಸ್ಪತ್ರೆಗೆ ತಲುಪಿದ್ದು ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.