ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯವಾದ ಏರಿಕೆಯಾಗಿದೆ.
ಜಲಾಶಯದ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು,ಪರಿಣಾಮವಾಗಿ ಸೋಮವಾರ ಪೂರ್ವಾಹ್ನದಿಂದ ಜಲಾಶಯದಿಂದ 20ಸಾವಿರ ಕ್ಯುಸೆಕ್ಸ್ ಪ್ರಮಾಣದ ನೀರನ್ನು ನದಿಗ ಬಿಡುಗಡೆ ಮಾಡಲಾಗುತ್ತಿದೆ.
ಇದರಿಂದಾಗಿ ಹಾರಂಗಿ ಹಾಗೂ ಕಾವೇರಿ ನದಿಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ.
ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.