20 World Cup : ಲಂಕಾ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಇಂಗ್ಲೆಂಡ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 1 ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ದ 4 ವಿಕೆಟ್‌ ಜಯ ಸಾಧಿಸಿದ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಸೆಮಿಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.

ಲಂಕಾ ಸೋತ ಕಾರಣ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಸೆಮಿಫೈನಲ್ ಪ್ರವೇಶಿಸುವ ಅಸೆ ಭಗ್ನಗೊಂಡಿದೆ. ಮತ್ತೊಮ್ಮೆ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶನ ತೋರಿದ ಬೆನ್ ಸ್ಟೋಕ್ಸ್‌, ಇಂಗ್ಲೆಂಡ್ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು.

ಸಮಯೋಚಿತ ಬ್ಯಾಟಿಂಗ್ ನಡೆಸಿದ ಬೆನ್ ಸ್ಟೋಕ್ಸ್‌ ಅಜೇಯ 44 ರನ್ ಬಾರಿಸಿ ಗೆಲುವಿನ ರೂವಾರಿ ಎನಿಸಿದರು. ಈ ಗೆಲುವಿನೊಂದಿಗೆ ಗ್ರೂಪ್ 1 ಹಂತದಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!