ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದ ಧಾರಾಶಿವ್ ನಗರದಲ್ಲಿ ಕಾಲೇಜು ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಲ್ಲೇ ಕುಸಿದು ಬಿದ್ದು 20 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಧಾರಾಶಿವ್ ನಗರದಲ್ಲಿ ಕಾಲೇಜು ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ 20 ವರ್ಷದ ವರ್ಷಾ ಖರಾತ್ ಎಂಬ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ವರ್ಷಾ ವೇದಿಕೆ ಮೇಲೆ ಕುಸಿದು ಬಿದ್ದ ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆಯೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಕಾಲೇಜಿನಲ್ಲಿ ವರ್ಷಾ ಖರಾತ್ ಮರಾಠಿ ಭಾಷೆಯಲ್ಲಿ ಭಾಷಣ ಮಾಡುತ್ತಿದ್ದರು. ಈ ವೇಳೆ, ಪ್ರೇಕ್ಷಕರು ನಗುತ್ತಿದ್ದರು. ಇದ್ದಕ್ಕಿದ್ದಂತೆ ವರ್ಷಾ ಅವರ ಮಾತು ನಿಧಾನವಾಗುತ್ತಾ ಮೈಕ್ ಇಟ್ಟು ಕುಸಿದು ಬಿದ್ದರು. ಕೂಡಲೇ ಪ್ರೇಕ್ಷಕರು ಆಕೆಯ ಸಹಾಯಕ್ಕೆ ಧಾವಿಸಿದರು.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವರ್ಷಾ 8 ವರ್ಷದವಳಿದ್ದಾಗ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೆ ಕಳೆದ ಹನ್ನೆರಡು ವರ್ಷಗಳಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಿರಲಿಲ್ಲ ಮತ್ತು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.