Wednesday, February 28, 2024

ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಕೇರಳ ಮೂಲದ ಅಪರ್ಣಾ ನಾಯರ್‌ (20) ಮೃತ ಯುವತಿ.

ಅಪರ್ಣಾ ನಾಯರ್ ಮುಂಬೈನ ಭಾರತೀಯ ನೌಕಾಪಡೆಯಲ್ಲಿ ಐಎನ್‌ಎಸ್ ವಿಭಾಗದಲ್ಲಿ ತರಬೇತಿ ಪಡೆಯುತ್ತಿದ್ದರು. ಸೋಮವಾರ ಬೆಳಗ್ಗೆ ನೌಕಾಪಡೆಯ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ ನೋಟ್‌ ಪತ್ತೆಯಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!